*ಸಾರ್ವತ್ರಿಕ ಕರ್ನಾಟಕ ವಿಧಾನಸಭಾ ಚುನಾವಣೆ-2023*

*ಸಾರ್ವತ್ರಿಕ ಕರ್ನಾಟಕ ವಿಧಾನಸಭಾ ಚುನಾವಣೆ-2023*

*ಭಾರತ ಚುನಾವಣಾ ಆಯೋಗದ ಉಪ ಮುಖ್ಯ ಚುನಾವಣಾ ಆಯುಕ್ತ ಅಜಯ್ ಭಾಡೂ ಅವರಿಂದ ವಿಧಾನಸಭಾ‌ ಚುನಾವಣೆ ಪೂರ್ವತಯಾರಿ ಪರಿವೀಕ್ಷಣೆ*

ಬೆಂಗಳೂರು, ಏಪ್ರಿಲ್ 11: ಭಾರತ ಚುನಾವಣಾ ಆಯೋಗ ಸಾರ್ವತ್ರಿಕ ಚುನಾವಣೆ ಕರ್ನಾಟಕ ವಿಧಾನಸಭೆ – 2023 ರ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ರಾಜ್ಯದಲ್ಲಿ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮೇ 10 ರಂದು ಮತದಾನ ಮತ್ತು ಮೇ 13 ರಂದು ಮತ ಎಣಿಕೆಯನ್ನು ಘೋಷಿಸಲಾಗಿದೆ.

ಏಪ್ರಿಲ್ 13 ರಿಂದ ಚುನಾವಣೆಗೆ ಸ್ಪರ್ಧಿಸುವವರು ನಾಮನಿರ್ದೇಶನಗಳನ್ನು ಸಲ್ಲಿಸಬಹುದಾಗಿದ್ದು, ಪ್ರಸ್ತುತ ಚುನಾವಣೆಗೆ ಸಂಬಂಧಿಸಿದಂತೆ ಇದುವರೆಗೆ ಕೈಗೊಳ್ಳಲಾಗಿರುವ ಪೂರ್ವ ತಯಾರಿಗಳು ಹಾಗೂ ಅಗತ್ಯ ಸಿದ್ಧತೆಗಳನ್ನು ಭಾರತ ಚುನಾವಣಾ ಆಯೋಗದ ಉಪ ಮುಖ್ಯ ಚುನಾವಣಾ ಆಯುಕ್ತ ಅಜಯ್ ಭಾಡೂ ಅವರು ಪರಿವೀಕ್ಷಿಸಿದರು.

ಅವರು ಇಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಕಚೇರಿಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ರಾಜ್ಯಮಟ್ಟದಲ್ಲಿ ಚುನಾವಣಾ ಪೂರ್ವ ತಯಾರಿ, ಮತದಾನದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳು, ಚುನಾವಣೆಗೆ ನಿಯೋಜಿಸಲ್ಪಟ್ಟಿರುವ ಅಧಿಕಾರಿಗಳ ಮಾಹಿತಿ, SVEEP ಚಟುವಟಿಕೆಗಳೂ ಸೇರಿದಂತೆ ಇತರೆ ಪ್ರಚಾರ ಕಾರ್ಯಕ್ರಮಗಳು ಹಾಗೂ ಅವುಗಳ ಅನುಷ್ಠಾನದ ವ್ಯವಸ್ಥೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಿದರು.

ಚುನಾವಣೆ ಪೂರ್ವತಯಾರಿಯ ಭಾಗವಾದ ಎಪಿಕ್ ಕಾರ್ಡ್ ನ ಮುದ್ರಣ ಹಾಗೂ ವಿತರಣೆ, ಮತಗಟ್ಟೆಗಳು, ಮತಯಂತ್ರಗಳ ತರಬೇತಿ, ನಾಮನಿರ್ದೇಶನದ ಪ್ರಕ್ರಿಯೆ, ಮಾದರಿ ನೀತಿ ಸಂಹಿತೆ ಹಾಗೂ ಕಾನೂನು ವ್ಯವಸ್ಥೆಯ ಅನುಷ್ಠಾನ, ಮತಚೀಟಿಗಳ ವಿತರಣೆ, ಮತದಾನದ ದಿನದ ಪೂರ್ವತಯಾರಿ ಸೇರಿದಂತೆ ಹಲವು ಪ್ರಮುಖ ವಿಷಯಗಳ ಬಗ್ಗೆ ಮಾಹಿತಿ ಪಡೆದರು.

ನಂತರ SVEEP ಕಾರ್ಯಕ್ರಮಗಳು, ಅಂಚೆ ಮತಪತ್ರಗಳು, ಮಾಹಿತಿ ತಂತ್ರಜ್ಞಾನ ಸೇರಿದಂತೆ ವಿವಿಧ ವಿಭಾಗಗಳಿಗೆ ಸಂಬಂಧಿಸಿದ ರಾಜ್ಯ ಮತ್ತು ಜಿಲ್ಲಾಮಟ್ಟದ ನೋಡಲ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಅವರ ವಿಷಯಗಳಿಗೆ ಸಂಬಂಧಿಸಿದಂತೆ ಮಾಹಿತಿಯನ್ನು ಪಡೆದು ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.

ರಾಜ್ಯದಲ್ಲಿ ಅತಿ ಹೆಚ್ಚು ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಬೆಂಗಳೂರು ನಗರದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹೆಚ್ಚಿನ ಪ್ರಾಮುಖ್ಯತೆಯನ್ನು ಪಡೆದಿದೆ. ಒಂದು ಕೋಟಿಗೂ ಹೆಚ್ಚು ಮತದಾರರನ್ನು ಹೊಂದಿರುವ ಹಾಗೂ 28 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಅತಿ ದೊಡ್ಡ ನಗರವಾಗಿದೆ. ಬೆಂಗಳೂರು ನಗರದ ಚುನಾವಣೆಗೆ ಸಂಬಂಧಿಸಿದಂತೆ ಪೂರ್ವ ತಯಾರಿಗಳ ಬಗ್ಗೆ ಬಿಬಿಎಂಪಿ ವಿಶೇಷ ಆಯುಕ್ತರು (ಚುನಾವಣೆ) ಸೇರಿದಂತೆ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾಹಿತಿ ಪಡೆದರು.

ರಾಜ್ಯದ 34 ಚುನಾವಣಾ ಜಿಲ್ಲೆಗಳ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ವರ್ಚುಯಲ್ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಪ್ರತಿ ಜಿಲ್ಲಾಮಟ್ಟದಲ್ಲಿ ಕೈಗೊಳ್ಳಲಾಗಿರುವ ಚುನಾವಣೆಯ ಪೂರ್ವ ತಯಾರಿ, ಕಾನೂನು ಸುವ್ಯವಸ್ಥೆ, ಎಪಿಕ್ ಮುದ್ರಣ ಹಾಗೂ ವಿತರಣೆ, ಮಾದರಿ ನೀತಿ ಸಂಹಿತೆ ಅನುಷ್ಠಾನ, ಜಾಗೃತ ದಳಗಳ ನಿಯೋಜನೆ, ಮತಗಟ್ಟೆಗಳಿಗೆ ಸಿಬ್ಬಂದಿ ನಿಯೋಜನೆ ಮತ್ತು ತರಬೇತಿ, ಅಂಚೆ ಮತ ಪತ್ರಗಳ ಪ್ರಕ್ರಿಯೆ, ಮತಯಂತ್ರಗಳು ಅಗತ್ಯ ದಾಸ್ತಾನು, ಮತದಾನ ದಿನದ ಮೇಲ್ವಿಚಾರಣೆ ಹಾಗೂ ಮತ ಎಣಿಕೆಯ ವ್ಯವಸ್ಥೆ, ಸುವಿಧಾ, ಸಿ-ವಿಜಿಲ್ ಆಪ್ ಸೇರಿದಂತೆ ಇತರೆ ಪ್ರಮುಖ ವಿಷಯಗಳ ಬಗ್ಗೆ ಸಭೆಯಲ್ಲಿ ಮಾಹಿತಿ ಪಡೆದು ಆಯೋಗದ ಕಾನೂನು ಪರಿಮಿತಿಯಲ್ಲಿ ಸುವ್ಯವಸ್ಥಿತವಾಗಿ ಚುನಾವಣೆಯನ್ನು ನಡೆಸುವಂತೆ ಕರೆ ನೀಡಿದರು.

kanews

kanews

Leave a Reply

Your email address will not be published. Required fields are marked *