*ನೈಜ ಹೋರಾಟಗಾರರ ವೇದಿಕೆ*. *ಬ್ರಿಜ್ ಭೂಷಣ್ ಶರಣ್ ಸಿಂಗ್ ಬಂದಿಸುವಂತೆ ಸಾಮಾಜಿಕ ಹೋರಾಟಗಾರರ ಆಗ್ರಹ*. . ಬೆಂಗಳೂರು. ಮೇ 05: ನವದೆಹಲಿಯ ಜಂತರ್ ಮಂತರ್ ನಲ್ಲಿ ಮಹಿಳಾ ಕುಸ್ತಿಪಟುಗಳ ಮೇಲೆ ಭಾರತ ಕುಸ್ತಿ ಫೆಡರೇಶನ್ ಅಧ್ಯಕ್ಷ ಬ್ರಿಜ್ಭೂಷಣ್ ಶರಣ್ ಸಿಂಗ್ ಲೈಂಗಿಕ ದೌರ್ಜನವೆಸಗಿರುತ್ತಾರೆ ಎಂದು ಹೇಳಲಾದ ಬಗ್ಗೆ ಮಹಿಳೆಯರು ಧರಣಿ ನಡೆಸುತ್ತಿದ್ದು ಪೊಲೀಸರು ಈ ಬಗ್ಗೆ ದೂರು ದಾಖಲಿಸದೆ ಇರುವುದನ್ನು ಗಮನಿಸಿದ ಭಾರತದ ಸರ್ವೋಚ್ಚ ನ್ಯಾಯಾಲಯ ನಿರ್ದೇಶನದಂತೆ ಎರಡು ಎಫ್ ಐ ಆರ್ ಗಳನ್ನು ಫೋಕ್ಸು ಕಾಯ್ದೆ ಅಡಿಯಲ್ಲಿ ದಾಖಲಿಸಿದರು ಸಹಿತ ಈವರೆಗೂ ಬ್ರಿಜ್ ಭೂಷಣ್ ಶರಣ್ ಸಿಂಗ್ ಬಂಧಿಸದೆ ಸರ್ಕಾರ ಮಹಿಳೆಯರ ಮೇಲೆ ದೌರ್ಜನ್ಯ ಎಸಗುವರ ಪರವಾಗಿ ನಿಂತಿದೆ ಎಂದು ಸರ್ಕಾರ ಮತ್ತು ಪೊಲೀಸರ ನಡೆಯನ್ನು ಪ್ರಶ್ನಿಸಿ, ವಿರೋಧಿಸಿ ನೈಜ್ಯ ಹೋರಾಟಗಾರರ ವೇದಿಕೆಯ ಟಿ ನರಸಿಂಹಮೂರ್ತಿ, ಹಿರಿಯ ಸಾಮಾಜಿಕ ಹೋರಾಟಗಾರ ಹೆಚ್ಎಂ ವೆಂಕಟೇಶ್ ಸಾಮಾಜಿಕ ಕಾರ್ಯಕರ್ತರಾದ ಮಲ್ಲು ಕುಂಬಾರ್, ಸುರೇಶ್ ಸೇರಿದಂತೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದ ಮುಖ್ಯ ದ್ವಾರದಲ್ಲಿ ಆರೋಪಿ ಸ್ಥಾನದಲ್ಲಿರುವ ಕುಸ್ತಿ ಫೆಡರೇಶನ್ ಅಧ್ಯಕ್ಷ ಬ್ರಿಜ್ಭೂಷಣ್ ಶರಣ್ ಸಿಂಗ್ ಅನ್ನು ಬಂಧಿಸುವಂತೆ ಒತ್ತಾಯಿಸಿದರು.