Find Articles

Loading...
My bookmarks 0

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ 2024–25ನೇ ಸಾಲಿನ ಮಹಿಳಾ ತರಬೇತಿ.

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ 2024–25ನೇ ಸಾಲಿನ ಮಹಿಳಾ ತರಬೇತಿ ಯೋಜನೆಯಡಿ ಆಯ್ಕೆಯಾದ ಶ್ರೀ ಈಶ್ವರಿ ಮಹಿಳಾ ಸಮಾಜ, ಕುಣಿಗಲ್, ತುಮಕೂರು ವತಿಯಿಂದ ಆಯೋಜಿಸಲಾದ ಸ್ವಯಂ ಉದ್ಯೋಗ ಟೈಲರ್ ತರಬೇತಿ ಕಾರ್ಯಕ್ರಮದ ಉದ್ಘಾಟನೆಯನ್ನು ನಿಗಮದ ಅಧ್ಯಕ್ಷರಾದ ಶ್ರೀಮತಿ ಜಿ. ಪದ್ಮಾವತಿ ಅವರು ನೆರವೇರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಕಾರ್ಯಕ್ರಮದಲ್ಲಿ ತುಮಕೂರು ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಡಾ. ಎಸ್. ಸಿದ್ದರಾಮಣ್ಣ, ಅಭಿವೃದ್ಧಿ ನಿರೀಕ್ಷಕರಾದ ಶ್ರೀಮತಿ ಜಾಹ್ನವಿ ಹಾಗೂ ಶ್ರೀಮತಿ ರಂಗಮ್ಮ, ಶ್ರೀ ಈಶ್ವರಿ ಮಹಿಳಾ ಸಮಾಜ, ಕುಣಿಗಲ್ ಅಧ್ಯಕ್ಷರು, ಇಲಾಖೆಯ ಅಧಿಕಾರಿಗಳು, ಫಲಾನುಭವಿಗಳು ಹಾಗೂ ಮಹಿಳೆಯರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ನಿಗಮದ ಅಧ್ಯಕ್ಷರಾದ ಶ್ರೀಮತಿ ಜಿ. ಪದ್ಮಾವತಿ ಅವರು, “ಮಹಿಳೆಯರು ಕೇವಲ ಮನೆಗೆ ಸೀಮಿತರಾಗದೆ ಸ್ವಾವಲಂಬಿಗಳಾಗಿ ಆರ್ಥಿಕವಾಗಿ ಸದೃಢರಾಗಬೇಕು. ಸರ್ಕಾರವು ಮಹಿಳೆಯರ ಅಭಿವೃದ್ಧಿಗಾಗಿ ಜಾರಿಗೊಳಿಸಿರುವ ವಿವಿಧ ಯೋಜನೆಗಳ ಸದುಪಯೋಗವನ್ನು ಪಡೆದುಕೊಂಡು ಸಮಾಜದಲ್ಲಿ ತಮ್ಮದೇ ಆದ ಗುರುತನ್ನು ನಿರ್ಮಿಸಿಕೊಳ್ಳಬೇಕು. ಇಂತಹ ಕೌಶಲ್ಯಾಭಿವೃದ್ಧಿ ತರಬೇತಿಗಳು ಮಹಿಳೆಯರ ಆತ್ಮವಿಶ್ವಾಸವನ್ನು ಹೆಚ್ಚಿಸಿ, ಸ್ವಯಂ ಉದ್ಯೋಗದ ಮೂಲಕ ಉತ್ತಮ ಜೀವನ ರೂಪಿಸಿಕೊಳ್ಳಲು ಸಹಕಾರಿಯಾಗುತ್ತವೆ” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

KNN News

Leave a Reply

Your email address will not be published. Required fields are marked *